Saturday, June 23, 2018

ಪಾಪಣ್ಣ ಭಟ್ಟರಿಗೆ ಯಕ್ಷಮಂಗಳ ಪ್ರಶಸ್ತಿ

              “ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜಯ್ಯ ಹೆಗ್ಗಡೆಯವರು ಧರ್ಮಾಧಿಕಾರಿಗಳಾಗಿದ್ದ ಸಮಯ. ಧರ್ಮಸ್ಥಳ ಮೇಳದ ಪ್ರದರ್ಶನವೊಂದರಲ್ಲಿ ಡಾ. ಶಿವರಾಮ ಕಾರಂತರ ಉಪಸ್ಥಿತಿ. ಪ್ರಸಂಗಚೂಡಾಮಣಿ’. ಕುರಿಯ ವಿಠಲ ಶಾಸ್ತ್ರಿಗಳ ಹನುಮಂತನ ಪಾತ್ರ. ಖುಷಿಯಾದ  ಕಾರಂತರುಆಟವನ್ನು ಸಿನೆಮಾ ಮಾಡೋಣಎಂದರಂತೆ. ಹೆಗ್ಗಡೆಯವರ ಸಮ್ಮತಿ. ಶೂಟಿಂಗಿಗೆ ಹಗಲು ಸೂಕ್ತ ಸಮಯ. ಕಲಾವಿದರು ಒಲ್ಲದ ಮನಸ್ಸಿನಿಂದ ಒಪ್ಪಿ ಸಹಕರಿಸಿದರು. ಮೊದಲ ದಿನ ಆರ್ಧ ಚಿತ್ರೀಕರಣ. ಮುಂದಿನದು ಮೂಡುಬಿದಿರೆಯಲ್ಲಿ ಎಂದು ನಿಗದಿಯಾಯಿತು. ಹಗಲು ವೇಷ ನಿರ್ವಹಿಸಲು ಕಲಾವಿದರ ಅಸಮ್ಮತಿ. ಹಾಗಾಗಿ ಶೂಟಿಂಗ್ ಅರ್ಧದಲ್ಲಿ ನಿಂತುಬಿಟ್ಟಿತು. ಪ್ರಸಂಗದಲ್ಲಿ ನಾನೂ ಪಾತ್ರ ವಹಿಸಿದ್ದೆ. ಕಾರಂತರು ಚೆನ್ನಾಗಿ ನೋಡಿಕೊಂಡಿದ್ದರು,” ಎಂದು ನೆನಪಿನ ಸುರುಳಿಯನ್ನು ಬಿಚ್ಚಿದರು, ಹಾಸ್ಯಗಾರ ಪೆರುವಡಿ (ಪೆರ್ವಡಿ, ಪೆರುವೋಡಿ) ನಾರಾಯಣ ಭಟ್ಟರು.
            ಉಭಯತಿಟ್ಟುಗಳಲ್ಲಿರಾಜಾಹಾಸ್ಯಎಂಬ ನೆಗಳ್ತೆಯನ್ನು ಪಡೆದ ಪೆರುವಡಿ ನಾರಾಯಣ ಭಟ್ಟರು ಮಾತಿಗಿಳಿದರೆ ಒಂದು ಕಾಲಘಟ್ಟದ ಯಕ್ಷಗಾನದ ಬದುಕು, ಸಾಮಾಜಿಕ ಜವಾಬ್ದಾರಿ, ಕಲಾವಿದನ ಹೊಣೆ.. ಹೀಗೆ ಮಿಂಚುತ್ತದೆ. ‘ಹಾಸ್ಯವೆಂದರೆ ವಿಕಾರವಲ್ಲ. ಅದೊಂದು ರಸ. ಅದನ್ನು ಕಲಾವಿದ ಅನುಭವಿಸಬೇಕು. ಕಲಾವಿದನ ಅಭಿವ್ಯಕ್ತಿಯಂತೆ ಪ್ರೇಕ್ಷಕನೂ ಅನುಭವಿಸಬೇಕು. ಯಕ್ಷಗಾನದ ಹಾಸ್ಯವೆಂದರೆ ನಕ್ಕು ನಲಿವ ಹಾಸ್ಯವಲ್ಲ. ಸಮಾಜದ ವಿಕಾರಗಳನ್ನು ಎತ್ತಿ ತೋರಿಸಿ, ಅದನ್ನು ತಿದ್ದುವ ಕೆಲಸವನ್ನೂ ಹಾಸ್ಯಗಾರ ಮಾಡಬೇಕಾಗುತ್ತದೆಎನ್ನುತ್ತಾರೆ.
              ಪೆರುವಡಿಯವರ ತಿರುಗಾಟದ ಕಾಲದ ಸಾಮಾಜಿಕ ವ್ಯವಸ್ಥೆಗಳು ತಪ್ಪನ್ನು ಎತ್ತಿ ತೋರಿದಾಗ ಒಪ್ಪಿಕೊಳ್ಳುವ, ರಂಗದ ಅಭಿವ್ಯಕ್ತಿಯನ್ನುಕಲೆಎಂದು ಸ್ವೀಕರಿಸುವ ಮನಃಸ್ಥಿತಿಯಿತ್ತು. ಈಗ ಕಾಲ ಬದಲಾದುದೋ, ‘ಬೌದ್ಧಿಕವಾಗಿ ಮುಂದುವರಿದಫಲವೋ ಗೊತ್ತಿಲ್ಲ, ರಂಗದ ಅಭವ್ಯಕ್ತಿಗೆ ಜಾತಿಯನ್ನೋ, ಅಂತಸ್ತನ್ನೋ ಪೋಣಿಸುವ ವಿಪರೀತ ಸ್ಥಿತಿಯನ್ನು ಕಾಣಬಹುದು. ಪಾತ್ರವೊಂದು ಪ್ರೇಕ್ಷಕರ ಅಭಿರುಚಿಯಂತೆ, ಆಸಕ್ತಿಯಂತೆ ರಂಗದಲ್ಲಿ ಓಡಾಡುವಂತಹ ಪರೋಕ್ಷ ನಿಯಂತ್ರಣ.
ಪೆರುವಡಿಯವರು ಹಾಸ್ಯಕ್ಕೆ ಗೌರವವನ್ನು ತಂದು ಕೊಟ್ಟ ಹಾಸ್ಯಗಾರ. ದಕ್ಷಾಧ್ವರ ಪ್ರಸಂಗದಲ್ಲಿ ಬರುವಬ್ರಾಹ್ಮಣ ಅಭಿವ್ಯಕ್ತಿಯಲ್ಲಿ ಗೇಲಿಯಿಲ್ಲ, ಶ್ರೀ ರಾಮ ವನಗಮನ ಪ್ರಸಂಗದಗುಹಪಾತ್ರವು ಜಾತಿಯನ್ನು ಲೇವಡಿ ಮಾಡುವುದಿಲ್ಲ. ಜರಾಸಂಧ ಪ್ರಸಂಗದಶೇಂದಿ ಮಾರಾಟಗಾರಪಾತ್ರವು ಯಾವುದೇ ವರ್ಗವನ್ನು ನೋಯಿಸುವುದಿಲ್ಲ. ಆದರೆ ಪಾತ್ರದ ಸುತ್ತ ಮುತ್ತ ಇರುವ ವಿಕಾರಗಳನ್ನು ಎತ್ತಿ ತೋರಿಸುತ್ತಿದ್ದರು. ಹೀಗೆ ಮಾಡುತ್ತಿದ್ದಾಗಲೆಲ್ಲಾ ವಿಪರೀತದ ಸೋಂಕಿಲ್ಲ. ಪಾತ್ರವು ನಕ್ಕು ನಲಿಯುವುದಿಲ್ಲ!
               ‘ಪಾಪಣ್ಣ ವಿಜಯಪ್ರಸಂಗದಪಾಪಣ್ಣಪಾತ್ರವು ಪೆರುವಡಿಯವರ ರಂಗಛಾಪನ್ನು ಎತ್ತರಕ್ಕೇರಿಸಿತು. ಹೆಸರಿನೊಂದಿಗೆಪಾಪಣ್ಣ ಭಟ್ರುಹೊಸೆಯಿತು. ಒಂದು ವರ್ಷವಲ್ಲ, ಹಲವು ಕಾಲ ಪ್ರಸಂಗವು ವಿಜೃಂಭಿಸಿತು. ‘ಇದನ್ನು ಮೊದಲು ಆಡುವಾಗ ಹೆದರಿಕೆಯಿತ್ತು. ಪೌರಾಣಿಕ ಪ್ರಸಂಗವನ್ನು ಒಪ್ಪಿಕೊಂಡ ಕಲಾಭಿಮಾನಿಗಳು ಸಾಮಾಜಿಕ ಕಥೆಯನ್ನು ರಂಗದಲ್ಲಿ ಸ್ವೀಕರಿಸಬಹುದೇ? ಇದಕ್ಕಾಗಿ ಕಾಫಿ ಎಸ್ಟೇಟ್ನಲ್ಲಿ ಮೊದಲ ಪ್ರಯೋಗವನ್ನು ಮಾಡಿದೆವು. ಹತ್ತಾರು ಪ್ರದರ್ಶನವಾದ ಬಳಿಕ ಧೈರ್ಯ ಬಂತುಎಂದು ಪಾಪಣ್ಣನ ಬದುಕನ್ನು ಮುಂದಿಡುತ್ತಾರೆ.
            ಪೆರುವಡಿಯವರದು ಸಹಜ ಹಾಸ್ಯ. ಕೃಷ್ಣಲೀಲೆ ಪ್ರಸಂಗದವಿಜಯ’, ಕೃಷ್ಣಾರ್ಜುನ ಕಾಳಗದಮಕರಂದ’, ದೇವ ದೂತ, ರಾಕ್ಷಸದೂತ.. ಹೀಗೆ ಪ್ರತೀ ಪಾತ್ರಗಳಿಗೂ ಪ್ರತ್ಯಪ್ರತ್ಯೇಕವಾದ ಅಭಿವ್ಯಕ್ತಿ. ರಂಗದಲ್ಲಿ ದೊರೆಯನ್ನೋ, ರಾಜನನ್ನೋ ಮೀರಿಸುವ ಆಳಲ್ಲ. ದೇವೇಂದ್ರನ ಸ್ಥಾನಗೌರವವನ್ನು ಅರಿತ ದೇವದೂತ. ನಾರದನಂತಹ ಭಕ್ತಿ ಹಿನ್ನೆಲೆಯ ಪಾತ್ರಗಳಲ್ಲಿ ಹಾಸ್ಯದ ಸೋಂಕಿಲ್ಲ. ಶ್ರೀದೇವಿಯಲ್ಲಿ ಸಂಧಾನಕ್ಕೆ ಬರುವ ಶುಂಭನ ಸಚಿವಸುಗ್ರೀವಹಾಸ್ಯಗಾರನಾಗುವುದಿಲ್ಲ! ಹೀಗೆ ಒಂದಲ್ಲ ಒಂದು ಪಾತ್ರಗಳನ್ನು ಹಿಡಿದು ಮಾತನಾಡಿದರೆ ಪೆರುವಡಿಯವರ ಪಾತ್ರವೈಶಿಷ್ಟ್ಯದ ಪಾರಮ್ಯ ಅರ್ಥವಾಗುತ್ತದೆ.
           ಪೆರುವಡಿಯವರಿಗೆ ಈಗ ತೊಂಭತ್ತೊಂದು ವರುಷ. ಪಾತ್ರದ, ಕಲಾವ್ಯವಸಾಯದ ದಿವಸಗಳನ್ನು ಮೆಲುಕು ಹಾಕುವಾಗ ಅವರ ವಯಸ್ಸು ಹಿಂದೋಡುತ್ತದೆ. ‘ಔಚಿತ್ಯ ಪ್ರಜ್ಞೆಯ ಸುಳಿವಿಲ್ಲದ ಹಾಸ್ಯ ನಗೆಗೀಡು. ರಂಗಕ್ಕೆ ಅನ್ಯಾಯ. ಪರೋಕ್ಷವಾಗಿ ತನಗೆ ತಾನು ಮಾಡಿಕೊಂಡ ಅಪಮಾನ. ಪ್ರೇಕ್ಷಕರು ನಗುತ್ತಾರೆ ಎಂದು ತೋಚಿದ್ದನ್ನು ಗೀಚುವುದಲ್ಲ. ಹಾಸ್ಯಗಾರನ ಪ್ರವೇಶ ಯಾವಾಗ ಆಗುತ್ತೆ ಎಂದು ಸಭಿಕರು ಕಾಯುವಂತಹ  ಸ್ಥಿತಿಯನ್ನು ಹಾಸ್ಯಗಾರ ನಿರ್ಮಾಣ ಮಾಡಬೇಕುಎನ್ನುತ್ತಾರೆ.
           ಪ್ರಸಿದ್ಧ ಪದ್ಯಾಣ ಮನೆತನ. ಸಂಕಯ್ಯ ಭಾಗವತರು ಮತ್ತು ಈಶ್ವರ ಭಾಗವತರು ಇವರ ಅಜ್ಜ. ಎಂಟನೇ ವರುಷದಿಂದ ತಾಳಮದ್ದಳೆಯಲ್ಲಿ ಭಾಗಿ. ಸ್ವಲ್ಪ ಸಂಸ್ಕø ಅಭ್ಯಾಸ. ಕುರಿಯ ವಿಠಲ ಶಾಸ್ತ್ರಿಗಳಕೃಷ್ಣ ಪಾತ್ರದಿಂದ ಪ್ರಭಾವಿ. ಪಾತ್ರದ ಗುಂಗು ಅಂಟಿತು. ಅದು ಬಿಡಿಸಲಾರದ ಅಂಟು. ಬಣ್ಣದ ಗೀಳು ಹೆಚ್ಚಾಯಿತು. ಮೇಳ ಕೈಬೀಸಿ ಕರೆಯಿತು. ಪಾರಂಪರಿಕವಾದ ಆರಂಭಿಕ ಕಲಿಕೆ. ಮುಂದೆ ದೇಹ, ಭಾಷೆ, ಶಾರೀರಗಳು ಹಾಸ್ಯ ರಸದ ಒತ್ತಿಗಿದ್ದುದರಿಂದಹಾಸ್ಯಗಾರರಾದುದು ಇತಿಹಾಸ.
            ಶ್ರೀ ಧರ್ಮಸ್ಥಳ ಮೇಳದಿಂದ ವ್ಯವಸಾಯ. ಬದುಕಿಗಾಗಿ ಹಲವು ಮೇಳಗಳಲ್ಲಿ ತಿರುಗಾಟ. ಮುಂದೆ ಮೂಲ್ಕಿ ಮೇಳದ ಯಜಮಾನಿಕೆ. ಹಾಸ್ಯಗಾರ ಮಾತ್ರವಲ್ಲ, ‘ಮೇಳದ ಯಜಮಾನನೆಂಬ ಹೆಗ್ಗಳಿಕೆ. ಮನೆತನಕ್ಕೂ, ಕಲಾಭಿಮಾನಿಗಳಿಗೂ ಮಾನ. ಡಾ.ಶೇಣಿಯವರು ಮಿಂಚಿದ್ದಬಪ್ಪನಾಡು ಕ್ಷೇತ್ರ ಮಹಾತ್ಮೆಪ್ರಸಂಗ ಮತ್ತು ಅವರ ಬಪ್ಪ ಪಾತ್ರಕ್ಕೆ ಉಸ್ಮಾನ್ ಆಗಿದ್ದ ರಂಗದಿವಸಗಳನ್ನು ಹಿರಿಯರು ಈಗಲೂ ಜ್ಞಾಪಿಸಿಕೊಳ್ಳುತ್ತಾರೆ. “ಇವರ ಯಜಮಾನಿಕೆಯ ಮೂಲ್ಕಿ ಮೇಳದ ಅಂದಿನ ಆಟಗಳ ಸ್ವಾರಸ್ಯಗಳು, ಯಶಸ್ಸು, ಸಂಪಾದನೆ, ಕಲಾವಿದರನ್ನು ಗುರುತಿಸುವ ಪರಿಯನ್ನು ಕಂಡಾಗ ಯಕ್ಷಗಾನಕ್ಕಾಗ ಸಂಭ್ರಮದ ದಿನಗಳು. ಆರ್ಥಿಕವಾಗಿ ಅಲ್ಲದಿದ್ದರೂ ಮಾನಸಿಕವಾಗಿ ಖುಷಿ ಕೊಟ್ಟ ದಿನಮಾನಗಳುಎನ್ನುತ್ತಾರೆ ಒಡನಾಡಿ ಹಿರಿಯರಾದ ಪಾತಾಳ ವೆಂಕಟ್ರಮಣ ಭಟ್.
          ದೇಹ ಮಾಗಿದೆ. ರಂಗದಲ್ಲಿ ಭಾಗವಹಿಸಲು ವಯಸ್ಸು ಅಡ್ಡಿಯಾಗಿದೆ. ದೇಹ ಓಕೆ ಅಂದರೂ, ಮನಸ್ಸು ಮುಷ್ಕರ ಹೂಡುತ್ತದೆ. ಹಾಗಾಗಿ ಪೆರುವಡಿಯವರು ಸ್ವಲ್ಪ ಮಟ್ಟಿಗೆ ರಂಗದಿಂದ ದೂರ. ಆದರೆ ಸುತ್ತೆಲ್ಲಾ ನಡೆಯುವ ಪ್ರದರ್ಶನಗಳಿಗೆ ಈಗಲೂ ಭೇಟಿ ನೀಡುವುದು, ಪ್ರದರ್ಶನವನ್ನು ಆಸ್ವಾದಿಸುವುದು, ಬಣ್ಣದ ಮನೆಗೆ ಹೋಗಿ ನೆನಪಿನ ಬುತ್ತಿಯನ್ನುಅಗತ್ಯ ಬಿದ್ದರೆಬಿಚ್ಚುವುದು, ತಾನು ನಿರ್ವಹಿಸುತ್ತಿದ್ದ ಪಾತ್ರಗಳು ರಂಗದಲ್ಲಿ ಇತರರಿಂದ ಕಳಪೆಯಾಗಿ ನಿರ್ವಹಿಸಲ್ಪಟ್ಟಾಗ ಮಮ್ಮಲ ಮರುಗುವುದು, ಆಪ್ತರಲ್ಲಿ ಮನಬಿಚ್ಚಿ ಮಾತನಾಡುವುದು.. ಹಿರಿಯರ ಇಳಿ ವಯಸ್ಸಿನ ಚಟುವಟಿಕೆ.
         ಹಾಸ್ಯಬ್ರಹ್ಮ ಪೆರುವಡಿ ನಾರಾಯಣ ಭಟ್ಟರಿಗೆ ಸಂದ ಪುರಸ್ಕಾರಗಳು ಹಲವು. ಸರಕಾರಿ ಮುದ್ರೆಯ ಪುರಸ್ಕಾರಗಳನ್ನು ಎತ್ತಿ ಹೇಳುವಷ್ಟಿಲ್ಲ! ಪ್ರಶಸ್ತಿಗಳು, ಸಂಮಾನಗಳು, ಗೌರವಗಳು ಸಾಲು ಸಾಲು. ‘ನನ್ನನ್ನು. ನನ್ನ ಹಾಸ್ಯವನ್ನು ಕಲಾಭಿಮಾನಿಗಳು ಸ್ವೀಕರಿಸಿದ್ದಾರಲ್ಲಾ, ಅದೇ ದೊಡ್ಡ ಪ್ರಶಸ್ತಿ. ಹಳಬರು ಸಿಕ್ಕಾಗಲೆಲ್ಲಾ ಅಂದಿನ ಅಭಿವ್ಯಕ್ತಿಯನ್ನು ನೆನಪಿಸಿ ಗಂಟೆಗಟ್ಟಲೆ ಮಾತನಾಡುತ್ತಾರಲ್ಲಾ.. ಇದಕ್ಕಿಂತ ದೊಡ್ಡ ಗೌರವ ಇನ್ನೇನು ಬೇಕು ಹೇಳಿಎನ್ನುತ್ತಾರೆ. ದಕ್ಷಿಣ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕಲಾ ರಂಗ ಪ್ರಶಸ್ತಿ, ಕುರಿಯ ಸಂಸ್ಮರಣ ಪ್ರಶಸ್ತಿ, ಪಾತಾಳ ಪ್ರಶಸ್ತಿ.. ಹೀಗೆ ಹಲವು ಪುರಸ್ಕಾರಗಳಿಂದ ಪುರಸ್ಕøತರು.
            ಪೆರುವಡಿಯವರ ಹಿರಿತನ, ಯಕ್ಷಸಾಧನೆಗೆ ಬಾರಿಯ ಮಂಗಳೂರು ವಿವಿ ಯಕ್ಷಗಾನ ಅಧ್ಯಯನ ಕೇಂದ್ರದಯಕ್ಷಮಂಗಳ ಪ್ರಶಸ್ತಿಅರಸಿ ಬಂದಿದೆ. 2018 ಎಪ್ರಿಲ್ 24ರಂದು ಅಪರಾಹ್ನ ಮಂಗಳೂರು ವಿಶ್ವವಿದ್ಯಾಲಯದಮಂಗಳ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ. ಬಡಗು ತಿಟ್ಟಿನ ಹಿರಿಯ ಭಾಗವತ ಮತ್ಯಾಡಿ ನರಸಿಂಹ ಶೆಟ್ಟಿ, ಯಕ್ಷ ಶಾಂತಲಾ ಪಾತಾಳ ವೆಂಕಟ್ರಮಣ ಭಟ್ ಇವರಿಗೂ ಯಕ್ಷಮಂಗಳ ಪ್ರಶಸ್ತಿಯ ಪ್ರದಾನ. ಅಲ್ಲದೆ ಡಾ.ಎನ್.ನಾರಾಯಣ ಶೆಟ್ಟಿ ಶಿಮಂತೂರು ಇವರಯಕ್ಷಗಾನ ಛಂದೋಬುಧಿಗ್ರಂಥಕ್ಕೆ ಪುರಸ್ಕಾರ. ಮಂಗಳೂರು ವಿವಿಯ ಕುಲಪತಿ ಪ್ರೊ.ಕೆ.ಭೈರಪ್ಪ ಇವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ
Prajavani / ದಧಿಗಿಣತೋ / 20-4-2018



No comments:

Post a Comment